ಅಂಚೆ ಮತ ಎಣಿಕೆಯನ್ನು ಜಾಗರೂಕತೆಯಿಂದ ನಡೆಸಿ: ಜಿಲ್ಲಾಧಿಕಾರಿ ಡಾ.ಕುಮಾರಅಂಚೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಒಟ್ಟು ೧೧ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್‌ಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಅಂಚೆ ಮತ ಪತ್ರ ಎಣಿಕೆಯ ಸಹಾಯಕ ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅಂಚೆ ಮತ ಎಣಿಕೆಯು ಬಹಳ ಸೂಕ್ಷ್ಮವಾಗಿದ್ದು, ಎಲ್ಲಾ ಮತ ಎಣಿಕೆ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು.