ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ ನಗದು, ಚಿನ್ನಾಭರಣ ನಾಶಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣಾಧಿಕಾರಿ ಮಂಜುನಾಥ್ ನೇತೃತ್ವದ ಸಿಬ್ಬಂದಿ ಒಂದು ಗಂಟೆಗೂ ಹೆಚ್ಚು ಕಾಲ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರಾದರೂ ಮನೆ ಮೇಲ್ಛಾವಣಿ, ಚಿನ್ನಾಭರಣ, ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇದರಿಂದಾಗಿ ಚಿಕ್ಕೇಗೌಡರ ಕುಟುಂಬಕ್ಕೆ ಇರಲು ನೆಲೆ ಇಲ್ಲದಂತಹ ಪರಿಸ್ಥಿತಿ ಎದುರಾಗಿದೆ.