ವರಮಹಾಲಕ್ಷ್ಮಿ ಪೂಜೆಗೆ ನಾಗಮಂಗಲ ತಾಲೂಕಿನಾದ್ಯಂತ ಸಿದ್ಧತೆವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ನಾಗಮಂಗಲ ಪಟ್ಟಣದ ಹೃದಯ ಭಾಗದಲ್ಲಿ ಪೂಜೆಗೆ ಬೇಕಾದ ಸಾಮಗ್ರಿ ಖರೀದಿ ಭರಾಟೆ ಜೋರಾಗಿತ್ತು. ಪಟ್ಟಣದ ತಾಲೂಕು ಆಡಳಿತ ಸೌಧದ ಮುಂಭಾಗದ ರಸ್ತೆ ಎರಡೂಬದಿಯಲ್ಲಿ ವಿವಿಧ ಬಗೆಯ ಹಣ್ಣುಗಳು, ಹೂವು, ಬಾಳೆ ಕಂದು, ಮಾವಿನಸೊಪ್ಪು ಮತ್ತು ವಿಶೇಷವಾಗಿ ತಾವರೆ ಹೂವುಗಳನ್ನು ರಾಶಿ ಹಾಕಿಕೊಂಡು ವರ್ತಕರು ವ್ಯಾಪಾರ ನಡೆಸಿದರು.