ಸಾತನೂರು ಬೆಟ್ಟದಲ್ಲಿ ಭಾರೀ ದನಗಳ ಜಾತ್ರೆ ಯಶಸ್ವಿಸಾತನೂರು ಬೆಟ್ಟದಲ್ಲಿ ನಡೆದ ಜಾತ್ರೆಗೆ ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ೩೫೬ ದನಗಳು ಭಾಗವಹಿಸಿದ್ದವು. ೫೬ ಜೋಡಿಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ಹಾಲು ಹಲ್ಲು, ಎರಡು ಹಲ್ಲು, ನಾಲ್ಕು ಹಲ್ಲು, ಆರು ಹಲ್ಲು, ಕಡೇ ಹಲ್ಲುಗಳನ್ನು ನೋಡಿ ಬಹುಮಾನಕ್ಕೆ ಆಯ್ಕೆ ಮಾಡಲಾಯಿತು. ಹಸುಗಳಲ್ಲೂ ಇದೇ ಮಾದರಿಯನ್ನು ಅನುಸರಿಸಲಾಯಿತು.