ಬೇಸಿಗೆ ರಜೆ ಮುಗಿಸಿ ಶಾಲೆಗೆ ಮರಳಿದ ವಿದ್ಯಾರ್ಥಿಗಳುಬೇಸಿಗೆ ರಜೆ ಮುಗಿದು ರಾಜ್ಯಾದ್ಯಂತ ಅನೇಕ ಖಾಸಗಿ ಶಾಲೆಗಳು ತೆರೆದುಕೊಳ್ಳುತ್ತಿದ್ದು, ತಾಲೂಕಿನ ಬಿ.ಜಿ.ನಗರದ ಬಿಜಿಎಸ್ ಮಾಡಲ್ ಪಬ್ಲಿಕ್ ಶಾಲೆ ಸೋಮವಾರ ಪುನರಾರಂಭಗೊಂಡಿತು. ಶಾಲೆ ಪ್ರಾಂಶುಪಾಲರು, ಅಧ್ಯಾಪಕರು, ಸಿಬ್ಬಂದಿಯಿಂದ ಭಾರತೀಯ ಸನಾತನ ಸಂಸ್ಕೃತಿಯನ್ನು ಬಿಂಬಿಸುವ ರೀತಿಯಲ್ಲಿ ಶಾಲೆಗೆ ಆಗಮಿಸಿದ ಮೊದಲ 10 ವಿದ್ಯಾರ್ಥಿಗಳಿಗೆ ಹೂವಿನ ಹಾರ ಹಾಗೂ ಪ್ರತಿ ವಿದ್ಯಾರ್ಥಿಗಳಿಗೂ ತಿಲಕವಿಟ್ಟು ಅಕ್ಷತೆ ಹಾಕಿ, ಆರತಿ ಬೆಳಗಿ ವಿಶೇಷ ಮಂಗಳವಾದ್ಯದೊಂದಿಗೆ ಸಾಂಪ್ರದಾಯಕ ಪೂರ್ಣಕುಂಭದೊಂದಿಗೆ ಸ್ವಾಗತ ನೀಡಲಾಯಿತು.