ಹನುಮ ಭಕ್ತರಿಗೆ ಪೊಲೀಸರಿಂದ ಕಿರುಕುಳ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆಕೆರಗೋಡು ಗ್ರಾಮದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಹನುಮ ಧ್ವಜಸ್ತಂಬದಲ್ಲಿ ಹನುಮ ಧ್ವಜ ಹಾರಾಟ ಗ್ರಾಮಸ್ಥರು ಹಾಗೂ ಹನುಮ ಭಕ್ತರು ಹೋರಾಟ ಮಾಡಿದ್ದರು. ಈಗ ಪ್ರತಿಭಟನೆ ಮಾಡಿದವರ ಮೇಲೆ ರೌಡಿಶೀಟರ್ ತೆರೆದಿದ್ದು, ರಾಜ್ಯ ಸರ್ಕಾರ ಹಾಗೂ ಸಚಿವ, ಶಾಸಕರ ಒತ್ತಡಕ್ಕೆ ಮಣಿದು ಇಂತಹ ಕೃತ್ಯಕ್ಕೆ ಪೊಲೀಸರು ನಿಂತಿದ್ದಾರೆ. ಕೆರಗೋಡು ಠಾಣೆ ಸಬ್ ಇನ್ಸ್‌ಪೆಕ್ಟರ್, ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಡಿವೈಎಸ್‌ಪಿ ಅವರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ.