ಶ್ರೀಭೂವರಾಹಸ್ವಾಮಿಗೆ ಅಭಿಷೇಕ, ಅಡ್ಡಪಲ್ಲಕ್ಕಿ ಉತ್ಸವ, ಶ್ರೀನಿವಾಸ ಕಲ್ಯಾಣ ಮಹೋತ್ಸವಭೂ ವರಾಹನಾಥನ ಕೃಷ್ಣ ಶಿಲಾ ವಿಗ್ರಹಕ್ಕೆ ಒಂದು ಸಾವಿರ ಲೀಟರ್ ಹಾಲು, 500 ಲೀಟರ್ ಎಳನೀರು, 500 ಲೀಟರ್ ಕಬ್ಬಿನಹಾಲು, ಪವಿತ್ರ ಗಂಗಾಜಲ, ಹಸುವಿನತುಪ್ಪ, ಜೇನುತುಪ್ಪ, ಅರಿಶಿನ, ಶ್ರೀಗಂಧ, ಸುಗಂಧ ದ್ರವ್ಯಗಳಿಂದ ಅಭಿಷೇಕ ನಡೆಸಲಾಯಿತು. ನಂತರ ಮಲ್ಲಿಗೆ, ಜಾಜಿ, ಸಂಪಿಗೆ, ಸೇವಂತಿಗೆ, ತುಳಸಿ, ಪವಿತ್ರ ಪತ್ರೆಗಳು ಸೇರಿದಂತೆ ಧವನ, ಕಮಲ ಸೇರಿದಂತೆ 58 ಬಗೆಯ ವಿಶೇಷ ಹೂವುಗಳಿಂದ ಪುಷ್ಪಾಭಿಷೇಕ ಮಾಡಿ ಲೋಕ ಕಲ್ಯಾಣರ್ಥವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.