೧೬ ಸ್ಟ್ರಾಂಗ್ ರೂಂಗಳಲ್ಲಿ ಮಂಡ್ಯ ಮತಯಂತ್ರಗಳು ಭದ್ರಮತದಾನ ಮುಗಿಯುತ್ತಿದ್ದಂತೆ ಆಯಾಯ ವಿಧಾನಸಭಾ ಕ್ಷೇತ್ರಗಳಲ್ಲಿ ಡಿ-ಮಸ್ಟರಿಂಗ್ ಕಾರ್ಯ ನಡೆಸಿ, ಮತದಾನಕ್ಕೆ ಬಳಸಿದ ಎಲ್ಲ ವಿದ್ಯುನ್ಮಾನ ಮತಯಂತ್ರ, ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್, ವಿವಿಪ್ಯಾಟ್ ಹಾಗೂ ಎಲ್ಲ ಶಾಸನಬದ್ಧ ದಾಖಲೆಗಳನ್ನು ಜಿಪಿಎಸ್ ಅಳವಡಿಸಿದ ವಾಹನದ ಮೂಲಕ ಸೂಕ್ತ ಪೊಲೀಸ್ ಭದ್ರತೆಯೊಡನೆ ಮಂಡ್ಯ ಸರ್ಕಾರಿ ಮಹಾವಿದ್ಯಾಲಯದ ಕಾಲೇಜಿಗೆ ತಂದು ಇಡಲಾಗಿದೆ.