ಮಾ.28ರಿಂದ ಶ್ರೀಚೌಡೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವಮಾ.28ರಂದು ಜಾತ್ರಾ ಮಹೋತ್ಸವದ ಅಂಗವಾಗಿ ದೇಗುಲದಲ್ಲಿ ಗಣಪತಿ ಪೂಜೆ, ಗಂಗಾ ಪೂಜೆ, ರಕ್ಷಾ ಬಂಧನ, ಅಂಕುರಾರ್ಪಣ, ಧ್ವಜ ಸ್ಥಾಪನೆ, ಕಳಸರಾದನ ಹಾಗೂ ಮಹಾ ಚಂಡಿ ಹೋಮ, ಗಣ ಹೋಮ, ನವಗ್ರಹ, ಮೃತ್ಯುಂಜಯ, ನವದುರ್ಗ, ಶಾಂತಿ ಹೋಮಗಳ ಕಾರ್ಯಗಳ ನಂತರ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಲಿವೆ. ನಂತರ ಮಧ್ಯಾಹ್ನ 12 ಗಂಟೆಗೆ ಅಮೃತ ಮಣ್ಣಿನಿಂದ ಮುಚ್ಚಲಾಗಿರುವ ಚೌಡೇಶ್ವರಿ ಅಮ್ಮನವರ ಗರ್ಭಗುಡಿಯ ಬಾಗಿಲನ್ನು ತೆರೆಯುವ ಮೂಲಕ ವಿಶೇಷ ಅಭಿಷೇಕ ಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿವೆ.