ಸಿಎಂ ಆಗಲು ಎಚ್ಡಿಕೆಯೇ ನನ್ನ ಬಳಿ ಕೈ ಕಟ್ಟಿ ನಿಂತಿದ್ದರು: ಚಲುವರಾಯಸ್ವಾಮಿಸಾವಿರ ಕೋಟಿ ಅನುದಾನ ತಂದಿದ್ದೀನಿ ಎಂದು ಬರಿ ಬಾಯಲ್ಲಿ ಹೇಳುವುದಿಲ್ಲ. ಅಭಿವೃದ್ಧಿ ಬಗ್ಗೆ ನಾವು ಮಾತನಾಡಿ ಅನುದಾನ ತಂದು ಕೆಲಸ ಮಾಡುತ್ತಿದ್ದೇವೆ. ಸಚಿವ ಸ್ಥಾನಕ್ಕಾಗಿ ಚಲುವರಾಯಸ್ವಾಮಿ ದುಂಬಾಲು ಬಿದ್ದಿದ್ದರು ಎಂದು ಹೇಳುವ ಅವರು, ಸಿಎಂ ಆಗಲು ನನ್ನ ಬಳಿ ಕೈ ಕಟ್ಟಿ ನಿಂತಿದ್ದರು. ಅವರಪ್ಪ, ಅವರ ಭಾವ ಬೇಡ ಎಂದಾಗ 39 ಜನ ಶಾಸಕರ ಬಳಿ ಅವರು ಹೇಗೆ ನಿಂತಿದ್ದರು ಅವರನ್ನೇ ಕೇಳಿ.