ಮಹಾ ಶಿವರಾತ್ರಿ: ಆದಿಚುಂಚನಗಿರಿಯಲ್ಲಿ ಪೂಜೆ ಪುನಸ್ಕಾರ, ಅಖಂಡ ಭಜನೆ ಕಾರ್ಯಕ್ರಮಅಖಂಡ ಭಜನೆಗೆ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಿದರು. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಜಾನಪದ ಕಲಾವಿದರು, ಶ್ರೀಮಠದ ಸಾಧು ಸಂತರು, ವಿದ್ಯಾರ್ಥಿಗಳು, ಭಕ್ತರು ಭಜನೆಯಲ್ಲಿ ಭಾಗವಹಿಸಿದ್ದರು. ಕ್ಷೇತ್ರದಲ್ಲಿ ರಾತ್ರಿಯಿಡೀ ಅಖಂಡ ಭಜನೆ, ಶಿವನಾಮ ಸ್ಮರಣೆ ನಡೆದವು. ಶ್ರೀಮಠದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಸೇರಿದಂತೆ ಸಾವಿರಾರು ಭಕ್ತಾದಿಗಳು ಹಾಜರಿದ್ದು ಕಲಾವಿದರನ್ನು ಪ್ರೋತ್ಸಾಹಿಸಿದರು.