ಎನ್ಎಚ್ ಯೋಜನಾ ನಿರ್ದೇಶಕರ ಕಚೇರಿ ಎದುರು ಶಾಸಕ ರವಿಕುಮಾರ್ ಉಪವಾಸ ಸತ್ಯಾಗ್ರಹನಮಗೆ ಯಾವ ಕಾರಣಕ್ಕೂ ಮೇಲ್ಸೇತುವೆ ಬೇಡ, ರೈತರು, ಮಹಿಳೆಯರು, ಜನಸಾಮಾನ್ಯರಿಗೆ ಅನುಕೂಲವಾಗಲು ಅಂಡರ್ ಪಾಸ್ ನಿರ್ಮಾಣ ಮಾಡಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಂಡರ್ ಪಾಸ್ಗೆ ಅನುಮತಿ ನೀಡುವವರೆಗೂ ನಾವು ಇಲ್ಲೇ ಇರುತ್ತೇವೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆ 8 ಕೋಟಿ ವೆಚ್ಚದಲ್ಲಿ ಅಂಡರ್ ಪಾಸ್ ನಿರ್ಮಿಸುವುದಾಗಿ ಹೇಳಿದ್ದರು. ಆದರೀಗ ಗುತ್ತಿಗೆದಾರರು ಸಿಗುತ್ತಿಲ್ಲ ಎಂದು ಕಾರಣ ಹೇಳುತ್ತಿದ್ದಾರೆ.