ವೈರಮುಡಿ ಬ್ರಹ್ಮೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ: ಶಾಸಕ ದರ್ಶನ್ ಪುಟ್ಟಣ್ಣಯ್ಯಮಂಡ್ಯ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆದರೆ, ವೈರಮುಡಿ ಉತ್ಸವಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಮೂಲ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಉತ್ತಮ ಶೌಚಾಲಯ, ವಾಹನ ನಿಲುಗಡೆಗೆ ವ್ಯವಸ್ಥಿತ ಸ್ಥಳ ಕಲ್ಪಿಸುವುದು, ಬ್ಯಾರಿಕೇಟ್, ವಿದ್ಯುತ್ ದೀಪಗಳು, ಕಲ್ಯಾಣಿಗಳ ಸ್ವಚ್ಛತೆ, ತುರ್ತು ಆರೋಗ್ಯ ಸೇವೆ, ಸಮರ್ಪಕವಾದ ಪೊಲೀಸ್ ಬಂದೋಬಸ್ತ್ ಗೆ ಕ್ರಮ ವಹಿಸಬೇಕು.