ನಶೆಯಲ್ಲಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದ ಆರೋಪಿಗಳ ಬಂಧನ ಶಿವಪುರ ರೈಲು ನಿಲ್ದಾಣದಲ್ಲಿ ಸೋಮವಾರ ಗೋಲ್ಗುಂಬಜ್ ಎಕ್ಸ್ಪ್ರೆಸ್ ರೈಲಿನಲ್ಲಿ ಕರ್ತವ್ಯ ನಿರತ ಮಂಡ್ಯ ಹೊರ ರೈಲ್ವೆ ಪೊಲೀಸ್ ಠಾಣೆ ಪೇದೆ ಎಸ್.ವಿ. ಸತೀಶ್ಚಂದ್ರ ಅವರ ಮೇಲೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಆರೋಪಿಗಳ ವಿರುದ್ಧ ಐಪಿಸಿ 143, 144, 307, 341, 353, 504 ಹಾಗೂ 149ರನ್ವಯ ಪ್ರಕರಣ ದಾಖಲು ಮಾಡಿಕೊಂಡ ನಂತರ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.