ದೆಹಲಿಯಲ್ಲಿ ರೈತರ ಬಂಧನ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ, ಅನೇಕ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ದೆಹಲಿಯಲ್ಲಿ ನಡೆಸುತ್ತಿದ್ದ ಚಳವಳಿಯನ್ನು ಕೇಂದ್ರ ಸರ್ಕಾರ ಹತ್ತಿಕುವ ಸಲುವಾಗಿ ಅರೆಸೇನಾ ಪಡೆ, ಪೊಲೀಸ್ ಬಲದಿಂದ ರೈತರನ್ನು ತಡೆದು ಅವರನ್ನು ಬಂಧಿಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರದ ರೈತರ ಕ್ಷಮೆ ಕೇಳಬೇಕು. ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು.