ಕೆಆರ್ಎಸ್ ಸುತ್ತ ಗಣಿಗಾರಿಕೆ ನಿಷೇಧಕ್ಕೆ ಜಿಲ್ಲಾಡಳಿತಕ್ಕೆ ಆಗ್ರಹಕೆ.ಆರ್.ಎಸ್. ಅಣೆಕಟ್ಟೆ ಕಾವೇರಿ ಕೊಳ್ಳದ ರೈತರ ಜೀವನಾಧಾರ, ಕನ್ನಂಬಾಡಿ ಸುತ್ತ ಮುತ್ತ ಎಗ್ಗಿಲ್ಲದೆ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಗೆ ಹೈಕೋರ್ಟ್ ಕಡಿವಾಣ ಹಾಕಿ ೨೦ ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಆದರೆ, ಗಣಿ ಮಾಲೀಕರ ಒತ್ತಡಕ್ಕೆ ಮಣಿದೋ.., ಇಲ್ಲ ಇನ್ನಾವುದೋ ಕಾರಣಕ್ಕಾಗಿ ಮತ್ತೆ ಟ್ರಯಲ್ ಬ್ಲಾಸ್ಟ್ ನಡೆಸಿ ಮತ್ತೊಮ್ಮೆ ಗಣಿಗಾರಿಕೆಗೆ ಕುಮ್ಮಕ್ಕು ನೀಡುತಿತರುವ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನಡೆಯನ್ನು ಖಂಡಿಸಿದ್ದಾರೆ.