ಧ್ವಜ ಪ್ರಕರಣ: ಕೆರಗೋಡಿನಲ್ಲಿ ಬಂದ್ ಯಶಸ್ವಿಬಂದ್ ಕರೆಯ ನಡುವೆಯೂ ನಗರ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳು, ಚಿತ್ರಮಂದಿರಗಳು, ದಿನಸಿ ಅಂಗಡಿಗಳು ಸೇರಿ ಇನ್ನಿತರೆ ವಾಣಿಜ್ಯ ಚಟುವಟಿಕೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಜಿಲ್ಲಾ ವಾಣಿಜ್ಯ ಮಂಡಳಿ ಬಂದ್ ಬೆಂಬಲಿಸುವುದಿಲ್ಲ ಎಂದು ಹೇಳಿದ್ದ ಕಾರಣ ವರ್ತಕರು, ವ್ಯಾಪಾರಿಗಳು ಅಂಗಡಿಗಳನ್ನು ಬಂದ್ ಮಾಡದೆ ವ್ಯಾಪಾರ-ವಹಿವಾಟಿನಲ್ಲಿ ನಿರತರಾಗಿದ್ದರು.