ಐದು ವರ್ಷದಲ್ಲಿ ನಾಲೆಗೆ ಬಿದ್ದು ೨೮೪ ಜನರ ಸಾವು..!ಕಳೆದ ಐದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ನಾಲೆಗೆ ಬಿದ್ದು ೨೮೫ ಜನರು ಸಾವನ್ನಪ್ಪಿದ್ದು, ೫೪೫ ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬೇಸಿಗೆ ಸಮಯದಲ್ಲಿ ಬೆಂಕಿ ಅವಘಡ ಪ್ರಕರಣಗಳು ಅಗ್ನಿಶಾಮಕ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸವಾಲಾಗಿ ಪರಿಣಮಿಸಿದರೆ, ಮಳೆಗಾಲದಲ್ಲಿ ಪ್ರವಾಹ ಹಾಗೂ ನಾಲಾ ದುರಂತ ಪ್ರಕರಣಗಳು ಎದುರಾಗುವುದು ಸರ್ವೇ ಸಾಮಾನ್ಯವಾಗಿದೆ.