ಕೋವಿಡ್ಗಿಂತಲೂ ಕ್ಯಾನ್ಸರ್ ಮಹಾಮಾರಿ ಭಯಾನಕ: ಡಾ.ನಿತೇಶ್ಜಾಗತಿಕವಾಗಿ ಮರಣಕ್ಕೆ ಕ್ಯಾನ್ಸರ್ ಪ್ರಮುಖವಾಗಿದೆ. 2020 ರಲ್ಲಿ ಒಂದು ಕೋಟಿಗೂ ಹೆಚ್ಚು ಸಾವುಗಳಿಗೆ ಕ್ಯಾನ್ಸರ್ ಕಾರಣವಾಗಿದೆ. ದೇಶದಲ್ಲಿ ಕಳೆದ ಎರಡು ವರ್ಷಗಳಲ್ಲಿ ಸುಮಾರು 19 ರಿಂದ 20 ಲಕ್ಷ ಪ್ರಕರಣಗಳು ವರದಿಯಾಗಿದೆ. ತಂಬಾಕು ಬಳಕೆ, ದೀರ್ಘ ಕಾಲದ ಮದ್ಯಪಾನ, ಧೂಮಪಾನ, ಅನಾರೋಗ್ಯಕರ ಆಹಾರ ಅಭ್ಯಾಸಗಳು, ದೈಹಿಕ ವ್ಯಾಯಾಮದ ಕೊರತೆ ಮತ್ತು ವಾಯು ಮಾಲಿನ್ಯಕ್ಕೆ ಒಡ್ಡಿಕೊಳ್ಳುವುದು ಇವೆಲ್ಲವೂ ಕ್ಯಾನ್ಸರ್ಗೆ ಕಾರಣವಾಗುತ್ತದೆ.