ಒಂದು ಕಡೆ ಚಿರತೆ ದಾಳಿಗೆ ಕುರಿಗಳು ಬಲಿ, ಮತ್ತೊಂದು ಕಡೆ ಬೋನಿಗೆ ಬಿದ್ದ ಹೆಣ್ಣು ಚಿರತೆದೊಡ್ಡೇಗೌಡನದೊಡ್ಡಿ ಗ್ರಾಮದ ಜಮೀನಿನೊಂದರ ಬಳಿ ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ 2 ವರ್ಷದ ಹೆಣ್ಣು ಚಿರತೆ ಸೆರೆಯಾದರೆ, ನಾಗಮಂಗಲ ತಾಲೂಕಿನ ಹರಳಕೆರೆ ಗ್ರಾಮದ ಹೊರವಲಯದಲ್ಲಿ ಚಿರತೆ ದಾಳಿಯಿಂದ 30 ಸಾವಿರಕ್ಕೂ ಹೆಚ್ಚು ಬೆಲೆ ಬಾಳುವ ನಾಲ್ಕು ಕುರಿಗಳು ಸಾವನ್ನಪ್ಪಿದ್ದು, ಮೂರು ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.