ಧರ್ಮದ ಆಧಾರದ ಮೇಲೆ ಮೀಸಲಾತಿ ಆರೋಪ: ಬಿಜೆಪಿ ಆಕ್ರೋಶಹಿಂದುಳಿದ ವರ್ಗದವರ ಮೀಸಲಾತಿ ಸಂವಿಧಾನ ಬದ್ಧ ಹಕ್ಕಾಗಿದ್ದು ಇದನ್ನು ಕಸಿಯುವ ಪ್ರಯತ್ನವನ್ನು ಬಿಜೆಪಿ ಪಕ್ಷ ವಿರೋಧಿಸುತ್ತದೆ. ಕರ್ನಾಟಕದಲ್ಲಿಯೂ ಕಾಂಗ್ರೆಸ್ ಸರ್ಕಾರ ಇದೇ ಮಾದರಿಯ ಮೀಸಲಾತಿ ತರಲು ಯೋಜನೆ ರೂಪಿಸಿದೆ, ಹಾಗೊಮ್ಮೆ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಸಿದು ಮುಸ್ಲಿಮರಿಗೆ ನೀಡಿದರೆ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಜಾತಿಗಳಿಗೆ ಅನ್ಯಾಯವಾಗಲಿದೆ.