ಜಿಪಂ, ತಾಪಂ ಸ್ಪರ್ಧೆಗೆ ಪೂರ್ವ ತಯಾರಿ..!ಜಿಪಂ ಮತ್ತು ತಾಪಂ ಕ್ಷೇತ್ರ ಪುನರ್ ವಿಂಗಡಣೆಯಾಗಿರುವುದರಿಂದ ಹಲವರು ತಾವು ಪ್ರತಿನಿಧಿಸುತ್ತಿದ್ದ ಕ್ಷೇತ್ರಗಳನ್ನು ಕಳೆದುಕೊಂಡು ಅವಕಾಶ ವಂಚಿತರಾಗಿದ್ದರೆ, ಕೆಲವರು ಹೊಸದಾಗಿ ಸೇರ್ಪಡೆಯಾಗಿರುವ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಕ್ಷೇತ್ರದ ಮೀಸಲಾತಿ ಹಿಂದೆ ಯಾವುದಿತ್ತು, ಈಗ ಯಾವ ಮೀಸಲಾತಿ ಆಗಬಹುದು ಎಂಬ ಲೆಕ್ಕಾಚಾರದೊಂದಿಗೆ ಕ್ಷೇತ್ರವನ್ನು ಪ್ರತಿನಿಧಿಸುವುದಕ್ಕೆ ಪೂರ್ವ ತಯಾರಿ ಆರಂಭಿಸಿದ್ದಾರೆ.