ಭಾರೀ ಗಾಳಿ-ಮಳೆ: ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸಾವುಸೋಮವಾರ ರಾತ್ರಿ ಸುಮಾರು 8.45ರ ಸಮಯದಲ್ಲಿ ಭಾರೀ ಬಿರುಗಾಳಿಯೊಂದಿಗೆ ಮಳೆ ಆರಂಭವಾಯಿತು. ಮಳೆಯ ಬಿರುಸಿಗಿಂತಲೂ ಗಾಳಿಯ ಆರ್ಭಟ ಜೋರಾಗಿತ್ತು. ಗಾಳಿಯ ರಭಸಕ್ಕೆ ರಸ್ತೆ ಬದಿಯಲ್ಲಿದ್ದ ಮರಗಳು ಉರುಳಿಬಿದ್ದವು. ಅಶೋಕನ ಗರದ ವಿವೇಕಾನಂದ ರಸ್ತೆ, ಆಸ್ಪತ್ರೆ ರಸ್ತೆ, ನೂರಡಿ ರಸ್ತೆ, ಬನ್ನೂರು ರಸ್ತೆ, ಮಹಿಳಾ ಕಾಲೇಜು ಪಕ್ಕದ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಮರದ ಕೊಂಬೆಗಳು ಉರುಳಿಬಿದ್ದವು.