ಯುವ ರೈತರಿಗೆ ಕಿರು ಉದ್ದಿಮೆ ಮಾದರಿ: ಕೃಷಿ ಸಚಿವ ಚಲುವರಾಯಸ್ವಾಮಿಕೃಷಿಯತ್ತ ಎಷ್ಟು ಹತ್ತಿರ ಹೋಗುವಿರೋ ಅಷ್ಟು ಲಾಭವಿದೆ. ಯುವಕರು ಕೃಷಿಯ ಕಡೆ ಆಸಕ್ತರಾದಾಗ ಸ್ವಾವಲಂಬಿಗಳಾಗಿ ಜೀವನ ಸಾಗಿಸಬಹುದು. ಜಿಲ್ಲೆಯಲ್ಲಿ ಭತ್ತ, ಕಬ್ಬು, ತೆಂಗು, ರಾಗಿ, ಅಡಕೆ, ತರಕಾರಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಬೆಳೆದ ಕಚ್ಚಾ ಬೆಳೆಯನ್ನು ಮಾರಾಟ ಮಾಡುತ್ತಿದ್ದಾರೆಯೇ ವಿನಃ ಅದನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿಲ್ಲ.