ಶಾಲೆಗಳಲ್ಲಿ ಶುಲ್ಕ ರಹಿತ ಉಚಿತ ಬೇಸಿಗೆ ಶಿಬಿರ ಮಕ್ಕಳಿಗೆ ಸಹಕಾರಿ: ರೇಣುಕಾಬರಪೀಡಿತ ಮಳೆ ಬಾರದ ಪ್ರದೇಶಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇಚ್ಛೆಪಟ್ಟ ಮಕ್ಕಳಿಗೆ ಮಧ್ಯಾಹ್ನ ಬಿಸಿ ಊಟ ನೀಡಬೇಕೆಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದ್ದರಿಂದ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನ ಮಕ್ಕಳಿಗೆ ಬಿಸಿ ಊಟ ನೀಡಲಾಗುತ್ತಿದೆ. ಮಕ್ಕಳಿಗೆ ಅನುಕೂಲವಾಗಲು ಪಠ್ಯೇತರ ಚಟುವಟಿಕೆಗಳನ್ನು ಕಲಿಸಲು ಉದ್ದೇಶಿಸಿ ಮಕ್ಕಳು ಬೇಸಿಗೆ ರಜೆಯನ್ನು ಸಂತೋಷದಿಂದ ಕಳೆಯಲು ಅನುವಾಗುವಂತೆ ಬೇಸಿಗೆ ಶಿಬಿರ ಹಮ್ಮಿಕೊಳ್ಳಲಾಗಿದೆ.