ಸಂತೆಕಸಲಗೆರೆಯಲ್ಲಿ ವಿಜೃಂಭಣೆಯ ಅಟ್ಟುಣ್ಣುವ ಜಾತ್ರೆಹುತಾತ್ಮ ವೀರ ಮಕ್ಕಳ ಆತ್ಮಕ್ಕೆ ಶಾಂತಿ ಕೋರುವ ಧ್ಯೋತಕವಾಗಿ ನಡೆಯುವ ಶ್ರೀ ಭೂಮಿ ಸಿದ್ದೇಶ್ವರ ಸ್ವಾಮಿ ಅಟ್ಟುಣ್ಣುವ ಜಾತ್ರೆ ಗುರುವಾರ ವಿಜೃಂಭಣೆಯಿಂದ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಸಂತೆಕಸಲಗೆರೆ, ಹನಿಯಂಬಾಡಿ, ಕಾರಸವಾಡಿ, ಕೊತ್ತತ್ತಿ, ಮೊತ್ತಹಳ್ಳಿ, ಮಂಗಲ, ಕೊತ್ತತ್ತಿ, ಬೇವಿನಹಳ್ಳಿ, ಮೊತ್ತಹಳ್ಳಿ, ಹುಲ್ಕೆರೆ ಸೇರಿದಂತೆ ಸುತ್ತಮುತ್ತಲ ೩೦ ಗ್ರಾಮದ ಜನರು ಈ ಜಾತ್ರೆಯಲ್ಲಿ ಭಾಗವಹಿಸಿದ್ದರು.