ಯದುಗಿರಿಯ ಅಧಿದೈವ ಚೆಲ್ವತಿರುನಾರಾಯಣಸ್ವಾಮಿಗೆ ಅಭಿಷೇಕದೊಂದಿಗೆ ವೈರಮುಡಿ ಬ್ರಹ್ಮೋತ್ಸವ ‘ಸಂಪನ್ನ’ವೈರಮುಡಿ ಜಾತ್ರಾ ಮಹೋತ್ಸವದ 10ನೇ ತಿರುನಾಳ್ ದಿನವಾದ ಬುಧವಾರ ಇಡೀ ದೇವಾಲಯವನ್ನು ಸ್ವಚ್ಛಗೊಳಿಸಿ ಯಾವುದೇ ಲೋಪದೋಷಗಳಿದ್ದರೂ ಕ್ಷಮಿಸುವಂತೆ ಕೋರಿ ಸಂಪ್ರೋಕ್ಷಣೆ ಮಾಡಿದ ನಂತರ ಮೂಲಮೂರ್ತಿ, ಉತ್ಸವಮೂರ್ತಿಗೆ ಹಾಲು, ಜೇನು, ಮೊಸರು, ಎಳನೀರು, ಪವಿತ್ರ ತೀರ್ಥಗಳಿಂದ ಅಭಿಷೇಕ ನೆರವೇರಿಸಲಾಯಿತು. ಮಹಾಭಿಷೇಕ ಮಧ್ಯೆ ಹರಿಷಿಣ ಅಲಂಕಾರ ನೆರವೇರಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಲಾಯಿತು.