ಚೆಲುವನಾರಾಯಣನಿಗೆ ಮುತ್ತುಮುಡಿ ಕಿರೀಟದ ಅಲಂಕಾರ ಉತ್ಸವ; ಶೇಷ ವಾಹನೋತ್ಸವವಿಶ್ವ ವಿಖ್ಯಾತ ವೈರಮುಡಿ ಉತ್ಸವಕ್ಕೆ ಮೇಲುಕೋಟೆ ಸಜ್ಜುಗೊಂಡಿದೆ. ಮಾ.21ರಂದು ನಡೆಯುವ ಕಿರೀಟಧಾರಣ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ವೈರಮುಡಿ ಉತ್ಸವ ಕಣ್ತುಂಬಿಕೊಳ್ಳಲು ತಮಿಳುನಾಡು ಆಂಧ್ರ, ತೆಲಂಗಾಣ, ಗುಜರಾಜ್ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ದ ತಂಡೋಪತಂಡವಾಗಿ ಭಕ್ತರು ಮೇಲುಕೋಟೆಗೆ ಆಗಮಿಸುತ್ತಿದ್ದು ಎಲ್ಲಾ ಛತ್ರಗಳು, ರಾಮಾನುಜಕೂಟಂಗಳು ವಸತಿಗೃಹಗಳು ಭಕ್ತರಿಂದ ತುಂಬಿ ತುಳುಕುತ್ತಿದೆ.