ಮಹಿಳೆ ಹೊಟ್ಟೆಯಿಂದ ಬರೋಬ್ಬರಿ 6 ಕೆಜಿ ಗೆಡ್ಡೆ ಪತ್ತೆ..!ಜ್ಯೋತಿ ಕಳೆದ ಆರು ತಿಂಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹಲವು ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಒಳಗಾಗಿದ್ದು, ಈ ವೇಳೆ ಗೆಡ್ಡೆ ಇರುವುದು ಪತ್ತೆಯಾಗಿದೆ. ಅಲ್ಲದೇ, ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರ ಚಿಕಿತ್ಸೆಗೆ ಲಕ್ಷಾಂತರ ರು. ವೆಚ್ಚ ಭರಿಸಬೇಕಾಗಿದ್ದರಿಂದ ಅಸಹಾಯಕರಾಗಿದ್ದರು. ಸ್ಥಳೀಯ ಸರ್ಕಾರಿ ಆಸ್ಪತ್ರೆ ವೈದ್ಯರ ಸಲಹೆ ಮೇರೆಗೆ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಬಂದು ಪರೀಕ್ಷೆಗೆ ಒಳಗಾಗಿದ್ದರು.