ಆಕರ್ಷಿಸಿದ ವಿಜ್ಞಾನ, ತಂತ್ರಜ್ಞಾನ ಮತ್ತು ಆಧ್ಯಾತ್ಮಿಕ ವಿಷಯಗಳನ್ನೊಳಗೊಂಡ ಪ್ರದರ್ಶನಮೇಳದಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ ಆರು ಅಂಗಸಂಸ್ಥೆಗಳೂ ಸೇರಿದಂತೆ 50ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಮತ್ತು ಹೊರಗಿನ ಪ್ರತಿಷ್ಠಿತ ಕಾಲೇಜುಗಳು, ಸರ್ಕಾರಿ ಸಂಸ್ಥೆಗಳಾದ ಇಸ್ರೋ, ಎಚ್‌ಎಎಲ್, ಡಿಆರ್‌ಡಿಓ, ವಿಶ್ವೇಶ್ವರಯ್ಯ ಇಂಡಸ್ಟ್ರೀಯಲ್ ಟೆಕ್ನಾಲಜಿಕಲ್ ಮ್ಯೂಸಿಯಂ, ಆಧ್ಯಾತ್ಮಿಕ ಕೇಂದ್ರಗಳು ಮತ್ತು ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು 200ಕ್ಕೂ ಹೆಚ್ಚು ಮಳಿಗೆಗಳಲ್ಲಿ ತಮ್ಮ ವಿಚಾರ ಮಾದರಿಗಳನ್ನು ಪ್ರದರ್ಶಿಸಿದರು.