ಪಾಂಡವಪುರದಲ್ಲಿ ಮತ್ತೊಂದು ಹೆಣ್ಣು ಭ್ರೂಣ ಹತ್ಯೆ ಕೇಸು ಪತ್ತೆ...!ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಆಂಬ್ಯುಲೆನ್ಸ್ ಚಾಲಕ ಆನಂದ್ (೩೭), ಹೊರಗುತ್ತಿಗೆ ಡಿ-ಗ್ರೂಪ್ ನೌಕರೆ ಅಶ್ವಿನಿ (೩೨), ಆಕೆಯ ತಾಯಿ ಸತ್ಯಮ್ಮ (೫೪), ಹಿಂದೆ ಪಾಂಡವಪುರ ಖಾಸಗಿ ನರ್ಸಿಂಗ್ ಹೋಂನಲ್ಲಿ ಡಿ-ಗ್ರೂಪ್ ನೌಕರೆಯಾಗಿದ್ದ ಗಿರಿಜಮ್ಮ (೪೮) ಬಂಧಿತರು.