ಕಟ್ಟಹಳ್ಳಿ ಏತ ಯೋಜನೆ ಬಿಜೆಪಿ ಸರ್ಕಾರದ ಸಾಧನೆ: ಕೆಸಿಎನ್ ಅಭಿಮಾನಿ ಬಳಗಎರಡು ಅವಧಿಗೆ ಜೆಡಿಎಸ್ ಪಕ್ಷದ ಶಾಸಕರಾಗಿದ್ದರೂ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದ ಅಭಿವೃದ್ಧಿಗೆ ನಯಾಪೈಸೆ ಅನುದಾನವನ್ನೂ ನೀಡಲಿಲ್ಲ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆ.ಸಿ.ನಾರಾಯಣಗೌಡರು ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರುವ ಮುನ್ನ ಬಿ.ಎಸ್.ಯಡಿಯೂರಪ್ಪ ಬಳಿ ಮಾತುಕತೆ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಗ್ಯಾರಂಟಿ ಪಡೆದುಕೊಂಡಿದ್ದರು.