ಪಾರಂಪರಿಕ ವೈದ್ಯ ಪದ್ಧತಿ ಉಳಿಸಲು ಸರ್ಕಾರ ಗಮನ ಹರಿಸಬೇಕು: ನಿರ್ಮಲಾನಂದನಾಥ ಸ್ವಾಮೀಜಿ ಸಲಹೆಪಾರಂಪರಿಕ ವೈದ್ಯ ಪದ್ಧತಿ ವೈದ್ಯಕೀಯ ಜಗತ್ತಿಗೆ ಮೂಲ ಬೇರಿದ್ದಂತೆ. ಮೂಲ ಬೇರಿಲ್ಲವೆಂದರೆ ಆಧುನಿಕ ಶೈಲಿಗೆ ಬಂದವರೆಲ್ಲರೂ ನಶಿಸಿ ಹೋಗುತ್ತಾರೆ. ಭೂಮಿ ಮೇಲಿರುವ ಪ್ರತಿಯೊಂದು ಗಿಡವೂ ಸಹ ಒಂದಲ್ಲ ಒಂದು ರೀತಿಯ ಔಷಧಿಗೆ ಬಳಕೆಯಾಗುತ್ತದೆ. ನಮ್ಮ ಗಿಡಮೂಲಿಕೆಗಳ ಪ್ರಬೇಧಗಳು ಅಳಿಯಬಾರದು, ಮುಂದಿನ ಪೀಳಿಗೆಗೆ ಅದು ಅನುಕೂಲವಾಗಲಿದೆ.