‘ಕೆವೈಸಿ’ ಮಾಡಿಸಲು ಮುಗಿಬಿದ್ದ ಗ್ಯಾಸ್ ಸಬ್ಸಿಡಿದಾರರು..!ಗ್ಯಾಸ್ ಸಬ್ಸಿಡಿ ಪಡೆಯುತ್ತಿರುವವರು ಕೆವೈಸಿ ಮಾಡಿಸುವುದು ಕಡ್ಡಾಯ ಮಾಡಿದ್ದರೂ ಅದಕ್ಕೆ ಅಂತಿಮ ದಿನಾಂಕವನ್ನು ನಿಗದಿಪಡಿಸಿಲ್ಲ. ಈ ಸಂಬಂಧ ಅಡುಗೆ ಅನಿಲ ನಿಯಂತ್ರಣ ಇಲಾಖೆಯಾಗಲೀ, ಆಹಾರ ಇಲಾಖೆಯವರಾಗಲೀ ಅಧಿಕೃತ ಪ್ರಕಟಣೆಯನ್ನೂ ಹೊರಡಿಸಿಲ್ಲ. ಕೆವೈಸಿಯನ್ನು ಗ್ಯಾಸ್ ಅಂಗಡಿಗೆ ಬಂದು ಮಾಡಿಸುವ ಅಗತ್ಯವೂ ಇಲ್ಲ. ಅಡುಗೆ ಅನಿಲವನ್ನು ಮನೆಗೆ ಪೂರೈಸಲು ಬರುವವರಿಗೆ ದಾಖಲೆಗಳನ್ನು ಕೊಟ್ಟು ಕೆವೈಸಿ ಮಾಡಿಸಬಹುದು.