ನಿರ್ಮಿತಿ ಕೇಂದ್ರದಲ್ಲಿ ನಕಲಿ ಎಂಜಿನಿಯರ್ಗಳ ಹಾವಳಿ ಪ್ರಕರಣನಿಗದಿತ ವಿದ್ಯಾರ್ಹತೆ ಇಲ್ಲದಿದ್ದರೂ ನಿಯಮ ಬಾಹಿರವಾಗಿ ನಿರ್ಮಿತಿ ಕೇಂದ್ರದ ಸೈಟ್ ಎಂಜಿನಿಯರ್ಗಳಾಗಿ ನೇಮಕ ಮಾಡಿಕೊಂಡಿದ್ದ ಮೂವರನ್ನು ಹುದ್ದೆಯಿಂದ ಕೈಬಿಡುವಂತೆ ಜಿಲ್ಲಾಧಿಕಾರಿಗೆ ತನಿಖಾ ತಂಡ ಶಿಫಾರಸು ಮಾಡಿದೆ. ನಿರ್ಮಿತಿ ಕೇಂದ್ರದ ಬಿ.ಎಲ್.ವೇಣುಗೋಪಾಲ್, ಕೆ.ಪ್ರಶಾಂತ್, ಮಂಡ್ಯ ತಾಲೂಕು ಚಿಕ್ಕಬಳ್ಳಿಯ ಕೆ.ಪಿ.ಶ್ರೀಧರ್ ಕೆಲಸದಿಂದ ವಜಾಗೊಂಡ ನಿಯಮಬಾಹಿರವಾಗಿ ನೇಮಕಗೊಂಡು ವಜಾಗೊಂಡ ನೌಕರರಾಗಿದ್ದಾರೆ.