ಮಾ.3ಕ್ಕೆ ಪಲ್ಸ್ ಪೋಲಿಯೋ ಕಾರ್ಯಕ್ರಮ: ಜಿಲ್ಲಾಧಿಕಾರಿ ಡಾ.ಕುಮಾರಈ ಹಿಂದೆ ಎಷ್ಟು ಬಾರಿ ಪಲ್ಸ್ ಪೋಲಿಯೋ ಲಸಿಕೆ ನೀಡಿದರೂ ಸಹ ಹೆಚ್ಚುವರಿಯಾಗಿ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು. ಜಿಲ್ಲೆಯಲ್ಲಿ ಯಾವುದೇ ಮಕ್ಕಳು (5 ವರ್ಷದೊಳಗಿನ) ಪಲ್ಸ್ ಪೋಲಿಯೋ ಲಸಿಕೆಯಿಂದ ವಂಚಿತರಾಗಬಾರದು. ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮದ ವ್ಯಾಪಕ ಪ್ರಚಾರವಾಗಬೇಕು. ಜಿಲ್ಲೆಯಲ್ಲಿರುವ ಹಳ್ಳಿಗಳಲ್ಲಿ, ಅನಕ್ಷರಸ್ಥ ಕುಟುಂಬಗಳು, ಕೂಲಿ ಕಾರ್ಮಿಕರ ಮನೆ ಮನೆಗೆ ಅಂಗನವಾಡಿ ಕಾರ್ಯಕರ್ತೆಯರು ಭೇಟಿ ನೀಡಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ತಿಳಿಸಬೇಕು.