ಅಗ್ನಿಶಾಮಕ ಠಾಣೆಯಲ್ಲಿ ವಾಯಿದೆ ಮುಗಿದಿರುವ ಹಳೆಯ ಜಲವಾಹನ..!ಈಗಾಗಲೇ ಬೇಸಿಗೆ ಆರಂಭವಾಗಿದೆ. ನಾಗಮಂಗಲ ತಾಲೂಕು ವ್ಯಾಪ್ತಿಯಲ್ಲಿ ಪ್ರತಿನಿತ್ಯ ಒಂದಲ್ಲೊಂದು ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಇಂತಹ ಪರಿಸ್ಥಿತಿಯಲ್ಲಿ ವಾಯಿದೆ ಮುಗಿದಿರುವ ಜಲವಾಹನವನ್ನು ರಸ್ತೆಗಿಳಿಸಲು ಅವಕಾಶವಿಲ್ಲದಿದ್ದರೂ ಕೂಡ ಸ್ವಂತ ಜವಾಬ್ದಾರಿಯಿಂದ ಅಧಿಕಾರಿಗಳು, ಸಿಬ್ಬಂದಿ ಜನರಿಗೆ ತುರ್ತು ಸೇವೆ ನೀಡುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.