ಜಿಪಂ, ತಾಪಂ ಚುನಾವಣೆಗೆ ಪಕ್ಷ ಸಂಘಟಿಸಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ಜಿಪಂ, ತಾಪಂ ಹಾಗೂ ಪುರಸಭೆ ಚುನಾವಣೆಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು ಪಕ್ಷ ಸಂಘಟನೆಯತ್ತ ಪ್ರತಿಯೊಬ್ಬರೂ ತಮ್ಮ ಗಮನ ಕೇಂದ್ರಿಕರಿಸಬೇಕು. ಹೋಬಳಿವಾರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಭೆ ಕರೆದು ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿ ಅನುಷ್ಠಾನಗೊಳಿಸಬೇಕು.