ಜನರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುವೆ: ಮನ್ಮುಲ್ ನೂತನ ನಿರ್ದೇಶಕ ಸಿ.ಶಿವಕುಮಾರ್ನನ್ನ ಚಿಕ್ಕಪ್ಪ ಸಿ.ಎಸ್.ಪುಟ್ಟರಾಜು ಅವರು ಮೂರು ಬಾರಿ ಶಾಸಕರಾಗಿ, ಒಂದು ಬಾರಿ ಸಂಸದರು, ಸಚಿವರಾಗಿ ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿ ಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಮಾರ್ಗದರ್ಶನದಲ್ಲಿ ಹೈನುಗಾರಿಕೆಯ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುವ ಜತೆಗೆ, ಯುವ ಸಮುದಾಯ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುತ್ತೇನೆ.