ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಬಹಳಷ್ಟಿದೆ. ಸದಾ ಶಿಕ್ಷಕರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು. ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಶಿಕ್ಷಕರು ಪಡೆದುಕೊಳ್ಳಬಹುದು. ಯಾವುದೇ ಬ್ಯಾಂಕ್ ಜೀವವಿಮೆ, ಆರೋಗ್ಯ ವಿಮೆ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ವಿ.ವಿ.ರಸ್ತೆಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಉಪನಿರ್ದೇಶಕರು ಹಾಗೂ ಶಿಕ್ಷಣಾಧಿಕಾರಿಗಳನ್ನು ಅಭಿನಂದಿಸಲಾಯಿತು.ಬಳಿಕ ಮಾತನಾಡಿದ ಭಾರತೀಯ ಸ್ಟೇಟ್ ಬ್ಯಾಂಕ್ ವಿವಿ ರಸ್ತೆ ಶಾಖೆಯ ಮುಖ್ಯ ವ್ಯವಸ್ಥಾಪಕ ಎಂ.ಪಿ.ವಿವೇಕ್, ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಸೇವೆ ಅನನ್ಯ. ಇವರ ಸೇವೆಯನ್ನು ಸದಾ ಸ್ಮರಿಸಿ. ಪ್ರತಿವರ್ಷದಂತೆ ಈ ವರ್ಷವೂ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಅಭಿನಂದಿಸಿದೆವು ಎಂದರು.
ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಬಹಳಷ್ಟಿದೆ. ಸದಾ ಶಿಕ್ಷಕರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು. ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಶಿಕ್ಷಕರು ಪಡೆದುಕೊಳ್ಳಬಹುದು. ಯಾವುದೇ ಬ್ಯಾಂಕ್ ಜೀವವಿಮೆ, ಆರೋಗ್ಯ ವಿಮೆ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಬಹುದು, ಕುಂದುಕೊರತೆ ಇದ್ದರೆ ನೇರವಾಗಿ ಬ್ಯಾಂಕ್ ಭೇಟಿ ನೀಡಿದರೆ ಉತ್ತಮ ಎಂದರು.ಇದೇ ವೇಳೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜು, ಪದವಿ ಪೂರ್ವ ಉಪನಿರ್ದೇಶಕ ಪ್ರಸನ್ನಕುಮಾರ್, ಶಿಕ್ಷಣಾಧಿಕಾರಿಗಳಾದ ಲಕ್ಷ್ಮೀ, ಸಿದ್ದರಾಜು, ಚಂದ್ರಕಾಂತ, ಶ್ರೀನಿವಾಸ್ ಸೇರಿದಂತೆ ಹಲವರನ್ನು ಭೇಟಿ ಮಾಡಿ ಅಭಿನಂದಿಸಿದರು. ಬ್ಯಾಂಕ್ ಸಿಬ್ಬಂದಿ ಶುಭಶ್ರೀ ಪ್ರಸಾದ್, ವಿನಯ್ ಮತ್ತಿತರರಿದ್ದರು.ವಿಶ್ವಕರ್ಮ ಜಯಂತಿಗೆ ಡೀಸಿ ಸೇರಿ ಅಧಿಕಾರಿಗಳು ಆಗಮಿಸಲಿ: ಬಸವರಾಜು ಆಗ್ರಹ
ಮಂಡ್ಯ:ಜಿಲ್ಲಾಡಳಿತದಿಂದ ನಡೆಯುವ ವಿಶ್ವಕರ್ಮ ಜಯಂತಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಆಗಮಿಸಬೇಕು ಎಂದು ಭುವನ ವಿಶ್ವಕರ್ಮ ಸಮಾಜದ ಅಧ್ಯಕ್ಷ ಎನ್.ಬಸವರಾಜು ಆಗ್ರಹಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಕೆಲ ವರ್ಷಗಳಿಂದ ಜಿಲ್ಲಾಡಳಿತದಿಂದ ನಡೆಯುವ ವಿಶ್ವಕರ್ಮ ಜಯಂತಿಗೆ ಡೀಸಿ ಸೇರಿ ಅಧಿಕಾರಿಗಳು ಗೈರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಪಂಚ ಕಸುಬುಗಳ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿರುವ ವಿಶ್ವಕರ್ಮ ಸಮಾಜದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗೈರಾಗುವುದು, ಅಪರ ಜಿಲ್ಲಾಧಿಕಾರಿ ಅಥವಾ ಸಹಾಯಕ ಅಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಕಳುಹಿಸುವುದು ನಡೆಯುತ್ತಿದೆ. ಇದು ಸರಿಯಲ್ಲ ಎಂದಿದ್ದಾರೆ. ವರ್ಷಕ್ಕೊಮ್ಮೆ ನಡೆಯುವ ಜಯಂತಿಗೆ ಡೀಸಿ ಹಾಜರಾಗಿ ಸಮುದಾಯಕ್ಕೆ ಸಲಹೆ ಸೂಚನೆ ನೀಡಬೇಕು ಮತ್ತು ಸಾಧಕರಿಗೆ ಸನ್ಮಾನ ಮಾಡುವುದರಿಂದ ಅವರಿಗೂ ಒಂದು ಸ್ಫೂರ್ತಿಯಾಗುತ್ತದೆ. ಜನಾಂಗಕ್ಕೂ ಗೌರವ ತರಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.