ಸಾರಾಂಶ
ಮಂಗಳೂರು ಮಹಾನಗರ ಪಾಲಿಕೆಯ ನೋಂದಾಯಿತ ಗುತ್ತಿಗೆದಾರರ ಸಂಘದ ನೂತನ ಕಚೇರಿಯ ಉದ್ಘಾಟನೆ ಪಾಲಿಕೆಯ ನೂತನ ಕಟ್ಟಡದ ತಳ ಅಂತಸ್ತಿನಲ್ಲಿ ನಡೆಯಿತು. ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ಉದ್ಘಾಟನೆ ನೆರವೇರಿಸಿದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರು ಮಹಾನಗರ ಪಾಲಿಕೆಯ ನೋಂದಾಯಿತ ಗುತ್ತಿಗೆದಾರರ ಸಂಘದ ನೂತನ ಕಚೇರಿಯ ಉದ್ಘಾಟನೆ ಪಾಲಿಕೆಯ ನೂತನ ಕಟ್ಟಡದ ತಳ ಅಂತಸ್ತಿನಲ್ಲಿ ನಡೆಯಿತು. ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ ಉದ್ಘಾಟನೆ ನೆರವೇರಿಸಿದರು.ಬಳಿಕ ಸ್ಕೌಟ್ ಅಂಡ್ ಗೈಡ್ಸ್ ಸಭಾಭವನದಲ್ಲಿ ಗುತ್ತಿಗೆದಾರರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವಂತಾಗಬೇಕು. ಅದೇ ರೀತಿ ನಿಗದಿತ ಅವಧಿಯಲ್ಲಿ ಅವರ ಬಿಲ್ ಪಾವತಿಸುವುದು ಸೂಕ್ತ ಕ್ರಮ ಎಂದರು.ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ಉತ್ತಮ ಗುಣಮಟ್ಟದ ಕೆಲಸಗಳಿಗೆ ಆದ್ಯತೆ ನೀಡಬೇಕಾಗಿದೆ ಎಂದರು.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಅಭಿವೃದ್ಧಿ ವಿಭಾಗದ ಉಪ ಆಯುಕ್ತ ನರೇಶ್ ಪಿ. ಶಣೈ, ಮುಖ್ಯ ಲೆಕ್ಕಾಧಿಕಾರಿ ಅಕ್ಷತಾ, ಕಾರ್ಯಪಾಲಕ ಅಭಿಯಂತರರಾದ ನಾಗರಾಜು ಆರ್.ಬಿ., ಜ್ಞಾನೇಶ್ ಇದ್ದರು.ಗುತ್ತಿಗೆದಾರ ಸಂಘದ ಅಧ್ಯಕ್ಷ ಎಚ್.ಕೆ. ಪುರುಷೋತ್ತಮ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವ ಅಧ್ಯಕ್ಷ ಎಂ.ಜಿ. ಹುಸೈನ್, ಉಪಾಧ್ಯಕ್ಷ ಕೆ.ಎಂ. ಶರೀಫ್, ಪ್ರಧಾನ ಕಾರ್ಯದರ್ಶಿ ಗುರು ಪ್ರಕಾಶ್, ಕಾರ್ಯದರ್ಶಿ ಲೋಕೇಶ್ ಬೋಳಾರ್, ಕೋಶಾಧಿಕಾರಿ ಜುಗುಲ್ ಪೌಲ್ ಸಲ್ದಾನ, ಉಪ ಕೋಶಾಧಿಕಾರಿ ಹುಸೇನ್ ಶೋಹಿಬ್, ಕ್ರೀಡಾ ಕಾರ್ಯದರ್ಶಿ ಜಾಕೀರ್ ಹುಸೈನ್ ಮತ್ತಿತರರು ಇದ್ದರು.