ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲಿ ಒಂದಾಗಿರುವ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು ೨೦೨೫-೨೬ನೇ ಸಾಲಿನಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಎಂದು ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ನಡೆದ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ‘ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಿದೆ.

ಮಂಗಳೂರು: ರಾಜ್ಯದ ಅಗ್ರಗಣ್ಯ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲಿ ಒಂದಾಗಿರುವ ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯು ೨೦೨೫-೨೬ನೇ ಸಾಲಿನಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಜಿಲ್ಲೆಯ ಅತ್ಯುತ್ತಮ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಎಂದು ಎಸ್‌ಸಿಡಿಸಿಸಿ ಬ್ಯಾಂಕಿನಲ್ಲಿ ನಡೆದ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ‘ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಿದೆ.

ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರವರು, ಉಭಯ ಜಿಲ್ಲೆಗಳಾದ ದ.ಕ. ಮತ್ತು ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್. ಎನ್. ರಮೇಶ್ ಮತ್ತು ಲಾವಣ್ಯ ಕೆ. ಆರ್., ಬ್ಯಾಂಕಿನ ಸರ್ವ ನಿರ್ದೇಶಕರುಗಳು, ದ. ಕ. ಮತ್ತು ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಅಧ್ಯಕ್ಷರುಗಳು, ಸಂಘದ ನಿರ್ದೇಶಕ ದಯಾಕರ ಆಳ್ವರವರ ಸಮಕ್ಷಮದಲ್ಲಿ ಸಂಘದ ಅಧ್ಯಕ್ಷ ಕೆ. ಜೈರಾಜ್ ಬಿ. ರೈಹಾಗೂ ಮಹಾಪ್ರಬಂಧಕ ಗಣೇಶ್ ಜಿ.ಕೆ. ಅವರಿಗೆ ಸಾಧನಾ ಪ್ರಶಸ್ತಿ ಪ್ರದಾನ ಮಾಡಿದರು.

ಸಂಘಕ್ಕೆ ಈ ಪ್ರಶಸ್ತಿ ಕಳೆದ ೧೦ ವರ್ಷಗಳಿಂದ ಸತತವಾಗಿ ಹಾಗೂ ಒಟ್ಟು ೧೫ನೇ ಬಾರಿಗೆ ಲಭಿಸಿರುವುದು ದಾಖಲೆಯಾಗಿದೆ.