ಮಂಗಳೂರು ಧರ್ಮಪ್ರಾಂತ್ಯದ ಪರಿಸರ ಆಯೋಗದ ವತಿಯಿಂದ ಧರ್ಮಪ್ರಾಂತ್ಯದ ವ್ಯಾಪ್ತಿಯ 124 ಧರ್ಮಕ್ಷೇತ್ರಗಳಲ್ಲಿ ಆಯೋಜಿಸಲಾಗಿದ್ದ ‘ನಮ್ಮ ಉಳಿವಿಗಾಗಿ ಪ್ರತಿಜ್ಞಾ ಆಂದೋಲನ 2026’ ಪರಿಸರ ಜಾಗೃತಿ ಅಭಿಯಾನದಲ್ಲಿ 1,36,966 ಮಂದಿ ಭಾಗವಹಿಸಿದ್ದಾರೆ. ಅಭಿಯಾನದ ಸಮಾರೋಪ ಸಮಾರಂಭ ಸುರತ್ಕಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಪರಿಸರ ಆಯೋಗದ ವತಿಯಿಂದ ಧರ್ಮಪ್ರಾಂತ್ಯದ ವ್ಯಾಪ್ತಿಯ 124 ಧರ್ಮಕ್ಷೇತ್ರಗಳಲ್ಲಿ ಆಯೋಜಿಸಲಾಗಿದ್ದ ‘ನಮ್ಮ ಉಳಿವಿಗಾಗಿ ಪ್ರತಿಜ್ಞಾ ಆಂದೋಲನ 2026’ ಪರಿಸರ ಜಾಗೃತಿ ಅಭಿಯಾನದಲ್ಲಿ 1,36,966 ಮಂದಿ ಭಾಗವಹಿಸಿದ್ದಾರೆ. ಅಭಿಯಾನದ ಸಮಾರೋಪ ಸಮಾರಂಭ ಸುರತ್ಕಲ್ ಚರ್ಚ್ ಸಭಾಂಗಣದಲ್ಲಿ ನಡೆಯಿತು.ಅಭಿಯಾನದ ಅಂಗವಾಗಿ ಪ್ರತಿಜ್ಞಾ ಪತ್ರಕ್ಕೆ ಸಹಿ ಹಾಕಿದವರ ಪೈಕಿ ಲಾಟರಿ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು. ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾ ಲಾಟರಿ ಮೂಲಕ ವಿಜೇತರನ್ನು ಆಯ್ಕೆ ಮಾಡಿದರು. ಕಣಚೂರು ವೈದ್ಯಕೀಯ ಕಾಲೇಜಿನ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ, ಪಂಜಿಮುಗೇರ್ ನಿವಾಸಿ ಅಬ್ದುಲ್ ರಝಿದ್ ಒಂದು ಲಕ್ಷ ರು. ನಗದು ಬಹುಮಾನಕ್ಕೆ ಆಯ್ಕೆಯಾದರು. ಬಿಷಪ್ ನಿವಾಸದಲ್ಲಿ ಅವರಿಗೆ ಬಹುಮಾನ ಹಸ್ತಾಂತರಿಸಲಾಯಿತು.
ಸಮಾರೋಪ ಸಮಾರಂಭದಲ್ಲಿ ಸುರತ್ಕಲ್ ಚರ್ಚ್ ಧರ್ಮಗುರು ಆಸ್ಟಿನ್ ಪೆರಿಸ್, ಮಂಗಳೂರು ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ರೊಯ್ ಕ್ಯಾಸ್ತೆಲಿನೊ ಇದ್ದರು.ಪರಿಸರ ಆಯೋಗದ ಕಾರ್ಯದರ್ಶಿ, ಕಾರ್ಯಕ್ರಮದ ಸಂಚಾಲಕ ಲುವಿ ಜೆ.ಪಿಂಟೊ ವಂದಿಸಿದರು. ಕ್ಲೆಮೆಂಟ್ ಪಿಂಟೊ ನಿರೂಪಿಸಿದರು.
-----ಮಂಗಳೂರು ಧರ್ಮಪ್ರಾಂತ್ಯದ ಪರಿಸರ ಆಯೋಗವು ಪ್ರತಿವರ್ಷ ಪರಿಸರ ಜಾಗೃತಿ ಅಭಿಯಾನಗಳನ್ನು ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆಯ ಕುರಿತು ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ.