ಸೆ. 22 ರಿಂದ ಮಂಗಳೂರು ದಸರಾ ಮಹೋತ್ಸವ

| Published : Jul 30 2025, 12:53 AM IST

ಸಾರಾಂಶ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.೨೨ ರಿಂದ ಅ.೨ರ ವರೆಗೆ ನಡೆಯುವ ಮಂಗಳೂರು ದಸರಾ ಮಹೋತ್ಸವ (ನವರಾತ್ರಿ ಉತ್ಸವ) ಹಿನ್ನೆಲೆಯಲ್ಲಿ ಮಹತ್ವದ ಪೂರ್ವಭಾವಿ ಸಮಾಲೋಚನಾ ಸಭೆ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಭಾನುವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರುಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.೨೨ ರಿಂದ ಅ.೨ರ ವರೆಗೆ ನಡೆಯುವ ಮಂಗಳೂರು ದಸರಾ ಮಹೋತ್ಸವ (ನವರಾತ್ರಿ ಉತ್ಸವ) ಹಿನ್ನೆಲೆಯಲ್ಲಿ ಮಹತ್ವದ ಪೂರ್ವಭಾವಿ ಸಮಾಲೋಚನಾ ಸಭೆ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಭಾನುವಾರ ನಡೆಯಿತು.

ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.

ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಮಂಗಳೂರು ದಸರಾವನ್ನು ವಿಶೇಷ ಹಾಗೂ ವೈಭವಯುತವಾಗಿ ನಡೆಸಲು ಈ ಬಾರಿ ಸರ್ವ ಸಿದ್ಧತೆ ನಡೆಸಲಾಗುತ್ತಿದೆ ಎಂದರು.

ನಾರಾಯಣ ಗುರುಗಳು ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಶಿವಲಿಂಗ ಪ್ರತಿಷ್ಠಾಪನೆ ನಡೆಸಿದ ಫೆ.೨೧ರ ದಿನದಂದು ಮುಂದಿನ ವರ್ಷ ಬೃಹತ್ ಕಾರ್ಯಕ್ರಮ ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ದೇಶ-ವಿದೇಶದಲ್ಲಿರುವ ಸಮಾಜದ ಬಂಧುಗಳನ್ನು ಜತೆಯಾಗಿಸಲು ಇದು ಸಹಕಾರಿಯಾಗಲಿದೆ ಎಂದರು.

ಕುದ್ರೋಳಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ಸಂತೋಷ್ ಕುಮಾರ್, ಕಿಶೋರ್ ದಂಡೆಕೇರಿ, ಕೃತೀನ್ ಡಿ.ಅಮೀನ್, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್‌ಕುಮಾರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮುಂತಾದವರು ಮತ್ತಿತರರು ಇದ್ದರು.

ಮಂಗಳೂರು ದಸರಾ ಯಶಸ್ಸಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಕ್ಷೇತ್ರದ ಭಕ್ತರು, ವಿವಿಧ ಸಂಘ ಸಂಸ್ಥೆಗಳ ನೂರಾರು ಪದಾಧಿಕಾರಿಗಳು ಭಾಗವಹಿಸಿದ್ದರು.