ಸಾರಾಂಶ
ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ. ಈ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆ ಸೋಮವಾರ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ. ಈ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆ ಸೋಮವಾರ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು.ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷ, ಲೋಕಸಭಾ ಸದಸ್ಯಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತಿದ್ದು, ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ಜಿಲ್ಲಾ ಕಂಬಳ ಸಮಿತಿಯ ವಿಜಯಕುಮಾರ್ ಕಂಗಿನಮನೆ ಮಾತನಾಡಿ, ಕಂಬಳಕ್ಕೆ ಇನ್ನಷ್ಟು ಮೆರೆಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಸರ್ವ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು. ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಮಾತನಾಡಿದರು.
ಜಿಲ್ಲಾ ಕಂಬಳ ಸಮಿತಿಯ ಪಿ.ಆರ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಮಂಗಳೂರು ಕಂಬಳ ಸಮಿತಿ ಉಪಾಧ್ಯಕ್ಷರಾದ ಕಿರಣ್ ಕುಮಾರ್, ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿಯ ಕೋಶಾಧಿಕಾರಿ ಪ್ರೀತಮ್ ರೈ ಇದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿ, ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು. ಕಾರ್ಯದರ್ಶಿ ಮನ್ಮತ್ ಶೆಟ್ಟಿ ನಿರೂಪಿಸಿದರು.