ಸಾರಾಂಶ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್‌ಕ್ಲಬ್ ದಿನಾಚರಣೆ ಮಾ.10ರಂದು ಬೆಳಗ್ಗೆ 9.30ರಿಂದ ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ನಡೆಯಲಿದೆ. ಹೈನುಗಾರಿಕೆಯಲ್ಲಿ ಅಪೂರ್ವ ಸಾಧನೆ ಮಾಡಿದ ಹರೇಕಳದ ಮೈಮೂನಾ ಮತ್ತು ಮರ್ಝಿನಾ ಅವರಿಗೆ ಪ್ರೆಸ್‌ಕ್ಲಬ್‌ನ ವರ್ಷದ ಪ್ರಶಸ್ತಿ ಪ್ರದಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಲಿದೆ. ಹಿರಿಯ ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ, ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಶರತ್ ಸಾಲ್ಯಾನ್, ಅಶೋಕ್. ಶೆಟ್ಟಿ ಬಿ.ಎನ್. ಇವರುಗಳು ಪ್ರೆಸ್‌ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ. ನಟ, ನಿರ್ದೇಶಕ ನಟ ದೇವದಾಸ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಡಾ. ರೊನಾಲ್ಡ್ ಅನಿಲ್ ಫರ್ನಾಂಡಿಸ್, ಪ್ರೆಸ್‌ಕ್ಲಬ್ ಸ್ಥಾಪಕ ಅಧ್ಯಕ್ಷ ಕೆ.ಆನಂದ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆರ್.ರಾಮಕೃಷ್ಣ , ಪ್ರೆಸ್‌ಕ್ಲಬ್ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿರುವರು ಎಂದು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.