ದೈಹಿಕ ಮತ್ತು ಮಾನಸಿಕ ಆರೋಗ್ಯ ಸಂವರ್ಧನೆಯಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಾನ, ಪ್ರಥಮ ಚಿಕಿತ್ಸಾ ತರಬೇತಿ ಸಹಿತ ಆರೋಗ್ಯ ರಕ್ಷಣೆ ಸಂಬಧಿತ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ರೆಡ್‌ಕ್ರಾಸ್ ಸಂಸ್ಥೆ ಯೋಗದ ಬಗ್ಗೆಯೂ ಯುವ ಜನತೆಯಲ್ಲಿ ಅರಿವು ಮೂಡಿಸುತ್ತಿದೆ ಎಂದು ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.

ಮಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯ ಸಂವರ್ಧನೆಯಲ್ಲಿ ಯೋಗ ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದಾನ, ಪ್ರಥಮ ಚಿಕಿತ್ಸಾ ತರಬೇತಿ ಸಹಿತ ಆರೋಗ್ಯ ರಕ್ಷಣೆ ಸಂಬಧಿತ ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುವ ರೆಡ್‌ಕ್ರಾಸ್ ಸಂಸ್ಥೆ ಯೋಗದ ಬಗ್ಗೆಯೂ ಯುವ ಜನತೆಯಲ್ಲಿ ಅರಿವು ಮೂಡಿಸುತ್ತಿದೆ ಎಂದು ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಎನ್‌ಎಸ್‌ಎಸ್ ವಿಭಾಗ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಸಹಯೋಗದಲ್ಲಿ ಎಸ್‌ಡಿಎಂ ಲಾ ಕಾಲೇಜಿನ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ನಡೆದ ಯೋಗ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ ಪ್ರೊ.ಡಾ.ಕುಣಾಲ್ ಮತ್ತು ಯೋಗ ತಜ್ಞೆ ಪಾರ್ವತಿ ಕುಣಾಲ್ ಯೋಗದ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು.

ಎಸ್‌ಡಿಎಂ ಲಾ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಮಹೇಶ್‌ಚಂದ್ರ ಅಧ್ಯಕ್ಷತೆ ವಹಿಸಿದ್ದರು. ರೆಡ್‌ಕ್ರಾಸ್ ಸೊಸೈಟಿಯ ಖಜಾಂಜಿ ಗುರುದತ್ ನಾಯಕ್, ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ, ನಿರ್ದೇಶಕ ಪಿ.ಬಿ.ಹರೀಶ್ ರೈ, ಕಾಲೇಜಿನ ಉಪ ಪ್ರಾಂಶುಪಾಲೆ ಬಾಲಿಕಾ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಉಮೇಶ್ ಗಟ್ಟಿ, ಸಂಯೋಜಕಿ ಡಾ.ಅನ್ನಪೂರ್ಣ ಶೇಟ್,

ಎನ್‌ಎಸ್‌ಎಸ್ ಯೋಜನಾಧಿಕಾರಿ ಡಾ.ಡಿಂಪಲ್ ಮೇಸ್ತ ಇದ್ದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಘವೇಂದ್ರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ದಿನಕರ ಶೆಟ್ಟಿ ವಂದಿಸಿದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಪ್ರೊ.ಪುಷ್ಪರಾಜ್ ಕೆ. ನಿರೂಪಿಸಿದರು.