-ಎಸ್‌ಸಿಡಿಸಿಸಿ ಬ್ಯಾಂಕ್: ದಾಖಲೆಯ ವ್ಯವಹಾರ-ಲಾಭ, ಹೊಸ ಇತಿಹಾಸ ನಿರ್ಮಾಣ!
-20,226.19 ಕೋಟಿ ರು. ವ್ಯವಹಾರ, 131.14 ಕೋಟಿ ರು. ಲಾಭ, ರಾಜ್ಯದಲ್ಲಿ ಹೊಸ ದಾಖಲೆ, ದೇಶಕ್ಕೆ ಮಾದರಿ, ಡಾ.ಎಂ.ಎನ್.ಆರ್. ಸಾಧನೆಕನ್ನಡಪ್ರಭ ವಾರ್ತೆ ಮಂಗಳೂರುಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ೨೦೨೫-೨೬ನೇ ವರದಿ ವರ್ಷದಲ್ಲಿ ೨೦,೨೨೬.೧೯ ಕೋಟಿ ರು. ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕೆ (೧೭,೩೬೬.೬೮ ಕೋಟಿ ರು.) ಹೋಲಿಸಿದರೆ ಈ ಬಾರಿ ಶೇ.೧೬.೪೭ ಏರಿಕೆಯನ್ನು ಕಂಡು ರಾಜ್ಯದಲ್ಲೇ ಹೊಸ ದಾಖಲೆ ನಿರ್ಮಿಸಿದೆ. ೨೦೨೬-೨೭ನೇ ಸಾಲಿಗೆ ೨೨,೫೦೦.೦೦ ಕೋಟಿ ರು. ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ.
ಎಸ್‌ಸಿಡಿಸಿಸಿ ಬ್ಯಾಂಕಿನ ಮಂಗಳೂರು ಪ್ರಧಾನ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷ, ಸಹಕಾರಿ ಧುರೀಣ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಈ ಕುರಿತು ವಿವರ ನೀಡಿದರು.ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕ್ ತನ್ನ ೧೧೩ ಶಾಖೆಗಳ ಮೂಲಕ ವರದಿ ವರ್ಷದಲ್ಲಿ ಅಮೋಘ ಸಾಧನೆಯನ್ನು ಮಾಡಿ ೩೧-೦೩-೨೦೨೬ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ೧೩೧.೧೪ ಕೋಟಿ ರು. ಲಾಭ ಗಳಿಸಿದೆ. ಇದು ಕಳೆದ ವರ್ಷದ ಲಾಭ (೧೧೦.೪೧ ಕೋಟಿ ರು.) ಕ್ಕಿಂತ ಶೇಕಡಾ ೧೮.೭೮ ಏರಿಕೆಯಾಗಿದೆ. ಇದು ರಾಜ್ಯದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳ ಪೈಕಿ ಸಾರ್ವಕಾಲಿಕ ದಾಖಲೆ ಲಾಭ. ಬ್ಯಾಂಕಿನ ಅನುತ್ಪಾದಕ ಆಸ್ತಿಯ ಪ್ರಮಾಣವು ಶೇ.೨.೪೨ ನಿಂದ ಶೇ.೨.೨೧ ಪ್ರಮಾಣಕ್ಕೆ ಇಳಿಕೆಯಾಗಿದೆ. ಇದು ಬ್ಯಾಂಕಿನ ಪ್ರಗತಿಯನ್ನು ಸೂಚಿಸುತ್ತದೆ.೯,೨೬೪.೬೪ ಕೋಟಿ ರು. ಠೇವಣಿ:
ಠೇವಣಿಗಳ ಸಂಗ್ರಹಣೆಯಲ್ಲಿ ಎಲ್ಲ ಬ್ಯಾಂಕ್‌ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯಾವುದೇ ಠೇವಣಾತಿ ಇಲ್ಲದೆಯೂ ತನ್ನ ೧೧೩ ಶಾಖೆಗಳ ಮುಖಾಂತರ ಒಟ್ಟು ೯,೨೬೪.೬೪ ಕೋಟಿ ರು. ಠೇವಣಿ ಸಂಗ್ರಹಿಸಿ ಸಾಧನೆ ಮಾಡಿದೆ. ಈ ಮೂಲಕ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ.೧೭.೫೩ ಹೆಚ್ಚಾಗಿದೆ.೯,೭೬೬.೭೫ ಕೋಟಿ ರು. ಮುಂಗಡ: ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ ೯,೭೬೬.೭೫ ಕೋಟಿ ರು. ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ೨,೧೫೬.೫೯ ಕೋಟಿ ರು., ಮಧ್ಯಮಾವಧಿ ಸಾಲ ೧೮೩.೪೬ ಕೋಟಿ ರು. ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ೨,೩೪೦.೦೫ ಕೋಟಿ ರು. ಸಾಲ ನೀಡಲಾಗಿದ್ದು, ಕೃಷಿಯೇತರ ಕ್ಷೇತ್ರಕ್ಕೆ ೭,೪೨೬.೭೦ ಕೋಟಿ ರು. ಸಾಲ ನೀಡಲಾಗಿದೆ. ಕೃಷಿ ಹಾಗೂ ಕೃಷಿಯೇತರ ಸಾಲಗಳ ಹೊರಬಾಕಿ ೧೦,೯೬೧.೫೫ ಕೋಟಿ ರು. ಆಗಿದೆ.ಕೃಷಿ ಸಾಲ ಮರುಪಾವತಿಯಲ್ಲಿ ರಾಷ್ಟ್ರೀಯ ಸಾಧನೆ: ಈ ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲ ಕೃಷಿ ಸಾಲಗಳು ಶೇಕಡಾ ೧೦೦ರ ಮರುಪಾವತಿಯನ್ನು ಕಂಡು ದಾಖಲೆ ನಿರ್ಮಿಸಿ ಸಾಧನೆ ಮಾಡಿವೆ. ಇಂತಹ ಸಾಧನೆಯನ್ನು ಕಳೆದ ೩೧ ವರ್ಷಗಳಿಂದ ಬ್ಯಾಂಕ್ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.
ಬ್ಯಾಂಕಿನ ಆರ್ಥಿಕ ತಖ್ತೆ: ಬ್ಯಾಂಕ್‌ಗೆ ಒಟ್ಟು ೧,೧೦೪ ಸಂಘಗಳು ಸದಸ್ಯರಾಗಿವೆ. ಬ್ಯಾಂಕಿನ ಒಟ್ಟು ಪಾಲು ಬಂಡವಾಳ ೫೫೪.೦೮ ಕೋಟಿ ರು. ಆಗಿರುತ್ತದೆ. ದುಡಿಯುವ ಬಂಡವಾಳ ೧೫,೦೨೭.೬೬ ಕೋಟಿ ರು. ಆಗಿದ್ದು, ಇದು ಕಳೆದ ವರ್ಷಕ್ಕಿಂತ (೧೨,೭೬೪.೯೯ ಕೋಟಿ ರು.) ಶೇಕಡ ೧೭.೭೩ ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ೩೧೨.೮೪ ಕೋಟಿ ರು. ವಿವಿಧ ನಿಧಿಗಳನ್ನು ಹೊಂದಿದ್ದು, ಶೇಕಡ ೧೬.೧೦ ರಷ್ಟು ಏರಿಕೆ ಕಂಡಿದೆ.ರುಪೇ (RuPay) ಕಿಸಾನ್ ಕ್ರೆಡಿಟ್ ಕಾರ್ಡ್: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ (RuPay) ಕಿಸಾನ್ ಕಾರ್ಡ್‌ನ್ನು ನೀಡಿದೆ. ಈಗಾಗಲೇ ೧,೪೪,೭೦೧ ರುಪೇ ಕಿಸಾನ್ ಕಾರ್ಡ್‌ಗಳನ್ನು ರೈತರಿಗೆ ವಿತರಿಸಲಾಗಿದೆ. ೯೨,೫೩೧ ರುಪೇ ಡೆಬಿಟ್ ಕಾರ್ಡ್‌ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ ನೀಡಲಾಗಿದೆ.
ಮುಂದಿನ ಯೋಜನೆ: ಈ ಬ್ಯಾಂಕ್ ಮುಂದಿನ ಅವಧಿಯಲ್ಲಿ ೧೦ ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹಮ್ಮಿಕೊಂಡಿದೆ. ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ. ವಾದಿರಾಜ ಶೆಟ್ಟಿ, ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೊಟ್ಟು, ದೇವಿಪ್ರಸಾದ್ ಶೆಟ್ಟಿ ಬೆಳಪು, ಅಶೋಕ್ ಕುಮಾರ್ ಶೆಟ್ಟಿ, ಮಹೇಶ್ ಹೆಗ್ಡೆ, ಮೋನಪ್ಪ ಶೆಟ್ಟಿ ಎಕ್ಕಾರು, ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಎಸ್.ಎನ್. ಮನ್ಮಥ, ಕುಶಾಲಪ್ಪ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಮತ್ತಿತರರಿದ್ದರು. ಹಣಕಾಸು ಸಚಿವಾಲಯ 4 ಬಾರಿ ಪ್ರಶಸ್ತಿಈ ಬ್ಯಾಂಕಿಗೆ ೨೩ ಬಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, ೧೯ ಬಾರಿ ನಬಾರ್ಡ್ ಪ್ರಶಸ್ತಿ ದೊರೆತಿದೆ. ಎರಡು ಬಾರಿ ಎಫ್‌ಸಿಬಿಎ ರಾಷ್ಟ್ರೀಯ ಪ್ರಶಸ್ತಿಯಿಂದ ಬ್ಯಾಂಕ್ ಪುರಸ್ಕೃತಗೊಂಡಿದೆ. ಬ್ಯಾಂಕಿನ ಸರ್ವಾಂಗೀಣ ಸಾಧನೆಗಾಗಿ ಎರಡು ಬಾರಿ ಪ್ರತಿಷ್ಠಿತ ಬ್ಯಾಂಕೊ ಬ್ಲೂ ರಿಬ್ಬನ್ ಪ್ರಶಸ್ತಿ ಲಭಿಸಿದೆ.ಇದಲ್ಲದೆ ಕೇಂದ್ರ ಸರ್ಕಾರದ ಮಹತ್ತರ ಅಟಲ್ ಪಿಂಚಣಿ ಯೋಜನೆಯನ್ನು ಬ್ಯಾಂಕ್ ಸಮರ್ಪಕವಾಗಿ ಜಾರಿಗೆ ತಂದಿದೆ. ಈ ಯೋಜನೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಚಂದಾದಾರರನ್ನು ನೋಂದಾಯಿಸಿ, ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ೪ ಬಾರಿ ಪ್ರಶಸ್ತಿಗೆ ಪಾತ್ರವಾಗಿದೆ.
ಐಎಂಪಿಎಸ್, ಯುಪಿಐ ಪಾವತಿಯೂ ಲಭ್ಯ: ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ (IMPS -Inter Bank Mobile Payment System) ಯೋಜನೆಯನ್ನು ಬ್ಯಾಂಕ್ ವರದಿ ವರ್ಷದಲ್ಲಿ ಕಾರ್ಯಗತಗೊಳಿಸಿದೆ. ಈ ಯೋಜನೆಯಿಂದ ಗ್ರಾಹಕರು ಹೆಚ್ಚು ಆಕರ್ಷಿತರಾಗಿರುವುದು ಕಂಡುಬಂದಿದೆ. ಮೊಬೈಲ್ ಮುಖಾಂತರ ತಮ್ಮ ಖಾತೆಯಿಂದ ಇತರ ಬ್ಯಾಂಕಿನ ಖಾತೆಗೆ ಹಣವನ್ನು ಸುಲಭವಾಗಿ ವರ್ಗಾಯಿಸಲು ಸಾಧ್ಯವಾಗಿದೆ. ಯುಪಿಐ ಪಾವತಿ: ಬ್ಯಾಂಕಿನ ಮತ್ತೊಂದು ಮಹಾತ್ವಾಕಾಂಕ್ಷೆಯ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ((Unified Payments Interface- UPI) ಈ ಯೋಜನೆ ಜನಸಾಮಾನ್ಯರು ಉಪಯೋಗಿಸುವ ಯುಪಿಐ ಪಾವತಿ ವಿಧಾನವಾಗಿದೆ. ಈ ವಿಧಾನದಲ್ಲೂ ಗ್ರಾಹಕರು ತಮ್ಮ ಸ್ಮಾರ್ಟ್‌ಫೋನ್‌ನ್ನು ವರ್ಚುವಲ್ ಡೆಬಿಟ್ ಕಾರ್ಡ್‌ನಂತೆ ಬಳಸಿ, ತ್ವರಿತವಾಗಿ ಪಾವತಿ ಮತ್ತು ಸ್ವೀಕೃತಿ ಸಾಧ್ಯ. ಮಾತ್ರವಲ್ಲ ಯುಪಿಐ ಸೇವೆಗಳಾದ ಗೂಗಲ್ ಪೇ, ಫೋನ್ ಪೇ ಹಾಗೂ ಇತರ ಪಾವತಿ ವಿಧಾನವನ್ನು ಸುಲಭವಾಗಿ ಬಳಸುತ್ತಿದ್ದಾರೆ. ಇದರಿಂದ ವಿದ್ಯುತ್ ಬಿಲ್, ನೀರಿನ ಬಿಲ್ ಹಾಗೂ ಟೆಲಿಫೋನ್ ಬಿಲ್‌ಗಳನ್ನು ಗ್ರಾಹಕರು ಸುಲಭವಾಗಿ ಪಾವತಿಸುತ್ತಿದ್ದಾರೆ. ಯುಪಿಐ ಚಾಲಿತ ಆಪ್‌ಗಳೊಂದಿಗೆ QR Code ಸ್ಕ್ಯಾನ್ ಮಾಡುವ ಮೂಲಕ ವ್ಯಾಪಾರ ಕೇಂದ್ರಗಳಲ್ಲೂ ಈ ಮಾದರಿಯನ್ನು ಉಪಯೋಗಿಸುತ್ತಿದ್ದಾರೆ.
ಸ್ವಸಹಾಯ ಗುಂಪು ಅನುಷ್ಠಾನ: ರಾಜ್ಯಕ್ಕೆ ಫಸ್ಟ್ಸ್ವ ಸಹಾಯ ಗುಂಪುಗಳ ಸಮರ್ಪಕ ಅನುಷ್ಠಾನದಲ್ಲಿ ಬ್ಯಾಂಕ್‌ಗೆ ರಾಜ್ಯದಲ್ಲೇ ಪ್ರಥಮ ಸ್ಥಾನ. ಈ ಬ್ಯಾಂಕ್ ಒಟ್ಟು ೩೪,೭೬೫ ಗುಂಪುಗಳನ್ನು ಹೊಂದಿದೆ. ಉಭಯ ಜಿಲ್ಲೆಗಳ ಎಲ್ಲ ನವೋದಯ ಸ್ವಸಹಾಯ ಸಂಘಗಳ ಮಹಿಳಾ ಸದಸ್ಯೆಯರಿಗೆ ಸಮವಸ್ತ್ರ ವಿತರಣೆಯನ್ನು ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ೧,೬೮,೫೮೩ ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದೆ. ೮೪,೭೯೭ ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ ಸೌಲಭ್ಯವನ್ನು ಒದಗಿಸಲಾಗಿದೆ.ಬ್ಯಾಂಕಿನ ಎಲ್ಲ ಶಾಖೆಗಳು ಸಂಪೂರ್ಣ ಗಣಕೀಕೃತಗೊಂಡು ಏಕಗವಾಕ್ಷಿ, ಆರ್.ಟಿ.ಜಿ.ಎಸ್/ ನೆಫ್ಟ್ ಹಾಗೂ ಕೋರ್ ಬ್ಯಾಂಕಿಂಗ್‌ನಂತಹ ಉತ್ಕೃಷ್ಟ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದೆ. ಬ್ಯಾಂಕಿನ ೨೦ ಶಾಖೆಗಳು ಸಂಪೂರ್ಣ ಹವಾನಿಯಂತ್ರಿತವಾಗಿ ಕಾರ್ಯನಿರ್ವಹಿಸುತ್ತಿವೆ.ಬ್ಯಾಂಕ್ ಮಂಗಳೂರಿನ ಕೇಂದ್ರ ಕಚೇರಿಯಲ್ಲಿರುವ ಕೊಡಿಯಾಲ್‌ಬೈಲ್ ಶಾಖೆ ಸೇರಿದಂತೆ ಪುತ್ತೂರು, ಉಪ್ಪಿನಂಗಡಿ, ಸವಣೂರು, ಬೆಳ್ತಂಗಡಿ ಹಾಗೂ ಸಿದ್ಧಾಪುರಗಳಲ್ಲಿರುವ ಶಾಖೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ.
ಮೊದಲ ಹೆಗ್ಗಳಿಗೆ ಪಾತ್ರವಾದ ಬ್ಯಾಂಕ್-ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕ್ ಎನ್ನುವ ಆಶಯದೊಂದಿಗೆ ಸುಸಜ್ಜಿತ ವಾಹನದಲ್ಲಿ (Bank on Wheel) ಎಲ್ಲ ರೀತಿಯ ಬ್ಯಾಂಕಿಂಗ್ ಸೇವೆಯನ್ನು ಹಾಗೂ ಎ.ಟಿ.ಎಂ. ಸೌಲಭ್ಯವನ್ನು ಕಾರ್ಯರೂಪಕ್ಕೆ ತಂದ ದೇಶದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಹೆಗ್ಗಳಿಕೆ ಹೊಂದಿದೆ. ಈಗಾಗಲೇ ಮಂಗಳೂರು ಹಾಗೂ ಉಡುಪಿಯಲ್ಲಿ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ಕಾರ್ಯರೂಪದಲ್ಲಿದೆ.-ಬ್ಯಾಂಕ್ ಸಿಬ್ಬಂದಿಗಳಿಗೆ ಪಿಂಚಣಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದ ರಾಜ್ಯದ ಮೊದಲ ಕೇಂದ್ರ ಸಹಕಾರಿ ಬ್ಯಾಂಕ್.-ಬ್ಯಾಂಕಿನ ಎಲ್ಲ ಶಾಖೆಗಳ ಭದ್ರತೆಯ ಹಿತದೃಷ್ಟಿಯಿಂದ ಸಿಸಿಟಿವಿ ಕೆಮರಾ ಅಳವಡಿಸಲಾಗಿದೆ.ತರಬೇತಿ ಕೇಂದ್ರ:
ಸಹಕಾರಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅಧ್ಯಕ್ಷರು ಹಾಗೂ ನಿರ್ದೇಶಕರು ಮತ್ತು ಸದಸ್ಯರಿಗೆ ಸಹಕಾರಿ ಕ್ಷೇತ್ರದ ಬಗ್ಗೆ ವಿಶೇಷ ಅನುಭವ ನೀಡಲು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಸುಸಜ್ಜಿತ ತರಬೇತಿ ಕೇಂದ್ರವನ್ನು ಬ್ಯಾಂಕ್ ಹೊಂದಿದೆ.ಟ್ಯಾಬ್ ಬ್ಯಾಂಕಿಂಗ್, ಮೊಬೈಲ್ ಆ್ಯಪ್
ಬ್ಯಾಂಕ್ ವ್ಯವಹಾರವನ್ನು ಸರಳೀಕರಿಸುವ ನಿಟ್ಟಿನಲ್ಲಿ ಟ್ಯಾಬ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಗ್ರಾಹಕರಿಗೆ ಬ್ಯಾಂಕ್ ಪರಿಚಯಿಸಿದೆ. ಮನೆ ಅಥವಾ ಕಚೇರಿಗಳಲ್ಲಿ ಕುಳಿತು ಮೊಬೈಲ್ ಸಂಪರ್ಕವಿರುವ ಬ್ಯಾಂಕಿನ ಟ್ಯಾಬ್ಲೆಟ್ ಬಳಸಿ ತಮ್ಮ ಬ್ಯಾಂಕ್ ಖಾತೆಯನ್ನು ತೆರೆಯುವ ಹಾಗೂ ನಿರ್ವಹಿಸುವ ನೂತನ ವ್ಯವಸ್ಥೆ ಇದಾಗಿದೆ. ಇದರಿಂದ ಗ್ರಾಹಕರು ಪ್ರತಿ ಬಾರಿ ಶಾಖೆಗಳಿಗೆ ಅಲೆದಾಡುವುದು ತಪ್ಪುತ್ತದೆ.ಮೊಬೈಲ್ ಆ್ಯಪ್ : ಈ ಯೋಜನೆಯ ಮುಖಾಂತರ ಗ್ರಾಹಕರ ಮೊಬೈಲ್ ಮೂಲಕ ಬ್ಯಾಂಕಿನ ಶಾಖೆಗಳ ನಡುವೆ ಒಂದು ಖಾತೆಯಿಂದ ಮತ್ತೊಂದು ಖಾತೆಗೆ ಹಣ ವರ್ಗಾಯಿಸಬಹುದು. ಅಲ್ಲದೆ ಮೊಬೈಲ್ ಮುಖಾಂತರವೇ ಗ್ರಾಹಕರ ಖಾತೆಯ ವ್ಯವಹಾರದ ವಿಚಾರಣೆ, ಮಿನಿಸ್ಟೇಟ್‌ಮೆಂಟ್ ಹಾಗೂ ಪಾಸ್‌ಬುಕ್ ನಿರ್ವಹಣೆಯ ಸೌಲಭ್ಯ ಪಡೆಯಬಹುದಾಗಿದೆ. ಎ.ಟಿ.ಎಂ. ಅಳವಡಿಕೆ: ಬ್ಯಾಂಕಿನ ಮುಖ್ಯ ಶಾಖೆಗಳಲ್ಲಿ ಎಟಿಎಂ ಅಳವಡಿಸಲಾಗಿದ್ದು, ಈಗಾಗಲೇ ಉಭಯ ಜಿಲ್ಲೆಗಳ ೧೬ ಶಾಖೆಗಳಲ್ಲಿ ಎ.ಟಿ.ಎಂ. ಅಳವಡಿಸಲಾಗಿದೆ.12 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಲಾಭದ ದಾಖಲೆ!: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ೧೧೨ ವರ್ಷಗಳ ಸಮೃದ್ಧ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ವಿಶಿಷ್ಟ ಹಾಗೂ ವಿನೂತನ ಸೇವೆಗಳನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿದೆ. ಅಭಿವೃದ್ಧಿಯ ಮುಂಚೂಣಿಯಲ್ಲಿರುವ ಬ್ಯಾಂಕ್ ಕೋರ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್‌ನಂತಹ ಉತೃಷ್ಠ ಬ್ಯಾಂಕಿಂಗ್ ವ್ಯವಸ್ಥೆಯ ಜೊತೆಗೆ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಮೂಲಕ ಯು.ಪಿ.ಐ. ಮತ್ತು ಐ.ಎಂ.ಪಿ.ಎಸ್. ಸೌಲಭ್ಯಗಳನ್ನು ಅಳವಡಿಸಿಕೊಂಡು ಗಣನೀಯ ಪ್ರಗತಿಯನ್ನು ಕಂಡಿದೆ.
ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ೧೧೨ ವರ್ಷಗಳ ಇತಿಹಾಸ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ವಿಶಿಷ್ಟ ಹಾಗೂ ವಿನೂತನ ಸೇವೆಗಳನ್ನು ಅಳವಡಿಸಿಕೊಂಡು ದೇಶಕ್ಕೆ ಮಾದರಿಯಾಗಿದೆ. ವ್ಯವಹಾರ ಮತ್ತು ಲಾಭದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದು, ಇದು ಕೂಡ ದಾಖಲೆಯಾಗಿದೆ.-ಡಾ.ಎಂ.ಎನ್.ರಾಜೇಂದ್ರ ಕುಮಾರ್, ಅಧ್ಯಕ್ಷರು, ಎಸ್‌ಸಿಡಿಸಿಸಿ ಬ್ಯಾಂಕ್