ಸಾರಾಂಶ
ಸ್ಟ್ರೀಟ್ ಫುಡ್ ಫಿಯೆಸ್ಟಗೆ ಈಗಾಗಲೇ ಸಕಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ಚಾಯ್ ವಾಲಾ ಡಾಲಿ ಎಲ್ಲರ ಪ್ರಮುಖ ಆಕರ್ಷಣೆ ಕೇಂದ್ರವಾಗಿದ್ದು ಇದೇ ರೀತಿಯ ಅನೇಕ ವಿಶಿಷ್ಟಗಳು ಈ ಬಾರಿ ಇರಲಿದೆ ಎಂದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಇದರ ಕಚೇರಿಯನ್ನು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ ಅಂಡ್ ಡೈಮಂಡ್ ಹೌಸ್ ಬಳಿ ಗುರುವಾರ ಉದ್ಘಾಟಿಸಲಾಯಿತು.ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ ಮಾತನಾಡಿ, ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿರುವ ಸ್ಟ್ರೀಟ್ ಫುಡ್ ಫಿಯೆಸ್ಟಗೆ ಸಂಬಂಧಪಟ್ಟ ಯಾವುದೇ ಮಾಹಿತಿಗಾಗಿ ಮಳಿಗೆದಾರರು, ಸಾರ್ವಜನಿಕರು ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದರು. ಸ್ಟ್ರೀಟ್ ಫುಡ್ ಫಿಯೆಸ್ಟಗೆ ಈಗಾಗಲೇ ಸಕಲ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಲ್ಲೂ ಚಾಯ್ ವಾಲಾ ಡಾಲಿ ಎಲ್ಲರ ಪ್ರಮುಖ ಆಕರ್ಷಣೆ ಕೇಂದ್ರವಾಗಿದ್ದು ಇದೇ ರೀತಿಯ ಅನೇಕ ವಿಶಿಷ್ಟಗಳು ಈ ಬಾರಿ ಇರಲಿದೆ ಎಂದರು.
ಪ್ರತಿಷ್ಠಾನದ ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಕಿರಣ್ ಶೆಣೈ, ಜಗದೀಶ್ ಕದ್ರಿ, ಸಂಜಯ್ ಪೈ ಇದ್ದರು.