ಸಾರಾಂಶ
ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ, ಕಡೇಗೋಳಿ, ಫರಂಗಿಪೇಟೆ, ಪಡೀಲು ಮೂಲಕ ಮಂಗಳೂರಿಗೆ ಈ ಸರ್ಕಾರಿ ಬಸ್ ಸಂಚರಿಸಲಿದೆ.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ. ಪೊಳಲಿ ಕ್ಷೇತ್ರದ ವಠಾರದಲ್ಲಿ ಬಸ್‌ಗೆ ಪೂಜೆ ನೆರವೇರಿಸಿ ಸಂಚಾರ ಆರಂಭಿಸಲಾಯಿತು.ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ, ಕಡೇಗೋಳಿ, ಫರಂಗಿಪೇಟೆ, ಪಡೀಲು ಮೂಲಕ ಮಂಗಳೂರಿಗೆ ಈ ಸರ್ಕಾರಿ ಬಸ್ ಸಂಚರಿಸಲಿದೆ.
ಇದರಿಂದಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಿದೆ. ಹಲವು ವರ್ಷದಿಂದ ಈ ಮಾರ್ಗದಲ್ಲಿ ಮಂಗಳೂರಿನಿಂದ ಪೊಳಲಿಗೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಇಲ್ಲಿನ ನಾಗರಿಕರು ಕೆಎಸ್‌ಆರ್‌ಟಿಸಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು. ಬ್ರಹ್ಮರಕೊಟ್ಲು ಯಕ್ಷಮಿತ್ರ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಮುತುವರ್ಜಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿಯೇ ಕೆಎಸ್‌ಆರ್‌ಟಿಸಿಬಸ್ ಬಸ್ ಆರಂಭಗೊಂಡಿದೆ. ನವರಾತ್ರಿಯ ಬಳಿಕವೂ ಈ ಬಸ್ ಸಂಚಾರ ಮುಂದುವರಿಯಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.